ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಪಕ್ಷ ತೊರೆಯಲು ಮುಂದಾಗಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮಧು ಬಂಗಾರಪ್ಪ ಅವರ ಮನವೊಲಿಸಲು ಜೆಡಿಎಸ್ ನಾಯಕರು ವಿಫಲರಾಗಿದ್ದು, ಈ ನಡುವೆ ಮಧು ಬಂಗಾರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ ಮಧು ಬಂಗಾರಪ್ಪ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ