EducationKarnataka News

*ಕರ್ನಾಟಕ ಬಂದ್: ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇದೆಯೇ?*

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಮೇಲೆ ಹಲ್ಲೆ, ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಶಾಲಾ-ಕಾಲೇಜು ರಜೆ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು.

ಶನಿವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದಿದ್ದರೆ ಮಕ್ಕಳಿಗೆ ತೊಂದರೆಯಾಗುತ್ತದೆ. ಬಂದ್ ಗೆ ಸಾರಿಗೆ ಇಲಾಖೆ ಬೆಂಬಲಿಸಿದರೆ ಶಾಲಾ-ಕಾಲೇಜು ಮಕ್ಕಳಿಗೆ ಸಮಸ್ಯೆಯಾಗುತ್ತದೆ. ಗೃಹ ಇಲಾಖೆ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.


Home add -Advt

Related Articles

Back to top button