Latest

*ಕ್ಷೇತ್ರದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ; ಮತ್ತೊಂದು ಸುಳಿವು*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಇನ್ನೊಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಸುಳಿವು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 25 ಕ್ಷೇತ್ರಗಳಿಂದ ನನಗೆ ಆಹ್ವಾನ ಬರುತ್ತಿದೆ. ಆದರೆ ಆ ಎಲ್ಲಾ ಕ್ಷೇತ್ರಗಳಿಂದ ಸ್ಪರ್ಧಿಸಲು ಸಾಧ್ಯವಿಲ್ಲ. ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧೆ ಮಾದುವಂತೆ ಹೇಳುತ್ತಿದ್ದಾರೆ. ಹಾಗಾಗಿ ವರುಣಾದಿಂದ ಟಿಕೆಟ್ ಕೇಳಿದ್ದೇನೆ ಎಂದಿದ್ದಾರೆ.

ವರುಣಾ ಜೊತೆಗೆ ಇನ್ನೊಂದು ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಹೇಳುತ್ತಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇನೆ ಎಂದು ತ್ತಿಳಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಈಬಾರಿಯೂ ಎರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

Home add -Advt

Related Articles

Back to top button