Kannada NewsKarnataka NewsLatest

*ಟ್ರಾನ್ಸ್ ಫಾರ್ಮರ್ ಸ್ಫೋಟ; ಧಗ ಧಗನೆ ಹೊತ್ತಿ ಉರಿದ ಅಂಗಡಿ*

3-4 ಮನೆಗಳಿಗೂ ಹರಡಿದ ಬೆಂಕಿ

Home add -Advt


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಗುಜರಿ ಅಂಗಡಿ ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ.

ಬೆಂಗಳೂರಿನ ಲಗ್ಗೆರೆಯಲ್ಲಿ ಈ ಅವಘಡ ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಫೊಟಗೊಂಡ ಪರಿಣಾಮ ಗುಜರಿ ಅಂಗಡಿಗೆ ಬೆಂಕಿ ತಗುಲಿದೆ. ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿದಿದೆ. ಅಕ್ಕಪಕ್ಕದ ಮೂರರಿಂದ ನಾಲ್ಕು ಮನೆಗಳಿಗೂ ಬೆಂಕಿ ಆವರಿಸಿದ್ದು, ಮನೆಗಳಿಗೂ ಹಾನಿಯಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


Related Articles

Back to top button