Kannada NewsLatestNationalPolitics

*ಮಧ್ಯಪ್ರದೇಶ: ಬಿಜೆಪಿ ಭಾರಿ ಮುನ್ನಡೆ; ಗಿಡ ನೆಟ್ಟು ಸಂಭ್ರಮಾಚರಣೆ ನಡೆಸಿದ ಶಿವರಾಜ್ ಸಿಂಗ್ ಚೌವ್ಹಾಣ್*

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಮತಣಿಕೆ ಬಿರುಸಿನಿಂದ ಸಾಗಿದು, ಯಾವ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬುದು ಬಹುತೇಕ ನಿಚ್ಚಳವಾಗುತ್ತಿದೆ.

ಮಧ್ಯಪ್ರದೇಶದಲ್ಲಿ ಆದಳಿತಾರೂಢ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ 137 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಬಿಜೆಪಿ ಮ್ಯಾಜಿಕ್ ಸಂಖ್ಯೆ 116 ದಾಟಿರುವ ಹಿನ್ನೆಲೆಯಲ್ಲಿ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಕಾರ್ಯಕರ್ತರೊಂದಿಗೆ ಸಂಭಮಾಚರಣೆ ಮಾಡಿದ್ದಾರೆ.

Home add -Advt

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಬಹುಮತ ಖಚಿತ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿವರಾಜ್ ಸಿಂಗ್ ಅವರಿಗೆ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ. ಇನ್ನೊಂದೆಡೆ ಶಿವರಾಜ್ ಸಿಂಗ್ ಚೌವ್ಹಾಣ್, ಕಾರ್ಯಕರ್ತರೊಂದಿಗೆ ಗಿಡ ನೆಡುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.


Related Articles

Back to top button