Latest

ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ದುರಂತ; ನಾಲ್ವರು ಮಕ್ಕಳು ದಾರುಣ ಸಾವು

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ನಡೆದಿದೆ.

ಆಸ್ಪತ್ರೆಯ ಮೂರನೇ ಫ್ಲೋರ್ ನಲ್ಲಿ ಮಕ್ಕಳ ವಾರ್ಡ್ ನಲ್ಲಿ ಈ ದುರಂತ ಸಂಭವಿಸಿದೆ. ನವಜಾತ ಶಿಶುಗಳು ಸೇರಿ 40 ಮಕ್ಕಳು ಈ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಂತದಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿದ್ದು, 36 ಮಕ್ಕಳನ್ನು ರಕ್ಷಿಸಲಾಗಿದೆ.

ಪ್ರಕರಣವನ್ನು ತನಿಖೆಗೆ ಆದೇಶಿಸಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮೃತ ಮಕ್ಕಳ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಕುಂಭದ್ರೋಣ ಮಳೆಗೆ ತಮಿಳುನಾಡು ತತ್ತರ; ನಾಲ್ವರು ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button