Politics

*ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಎತ್ತಿ ಹಿಡಿದಿರುವ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಜಾಗೊಳಿಸಿದೆ. ತಮ್ಮ ವಿರುದ್ಧ ಹೈಕೋರ್ಟ್ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ.

Home add -Advt

ಸಿಎಂ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಇಂದು ಗೃಹ ಕಚೇರಿ ಕೃಷ್ಣದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದು ಕುತೂಹಲ ಮೂಡಿಸಿದೆ.

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದಾರೆ.


Related Articles

Back to top button