Kannada NewsKarnataka NewsLatestNational

*ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಗೆ ನಿರಾಸೆಯಾಗಿದೆ.

ಭೋಪಾಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ಈ ಮೂಲಕ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಉಜ್ಜೈನ್ ಸೌಥ್ ಕ್ಷೇತ್ರದ ಶಾಸಕ ಮೋಹನ್ ಯಾದವ್ ಹೆಸರನ್ನು ಘೋಷಿಸಲಾಯಿತು.

ಮಧ್ಯಪ್ರದೇಶದಲ್ಲಿಯೂ ಎರಡು ಡಿಸಿಎಂ ಹುದ್ದೆ ಸೃಷ್ಟಿಯಾಗಿದ್ದು, ಡಿಸಿಎಂ ಆಗಿ ಜಗದೀಶ್ ದೇವಡಾ ಹಾಗೂ ರಾಜೇಶ್ ಶುಕ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಪೀಕರ್ ಆಗಿ ನರೇಂದ್ರ ಸಿಂಗ್ ಥೋಮರ್ ಅವರನ್ನು ಆಯ್ಕೆ ಮಾಡಲಾಗಿದೆ.


Home add -Advt

Related Articles

Back to top button