ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈ ನಡುವೆ ಕೊರೊನಾ ಭೀತಿಯಿಂದ ನಿವೃತ್ತ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೋಣಕೆರೆಯಲ್ಲಿ ನಡೆದಿದೆ.
ಚೋಣಕೆರೆಯ ಗ್ರಾಮದ 74 ವರ್ಷದ ಉತ್ತಯ್ಯ ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ. ತಮ್ಮ ಮನೆಯ ಮಲಗುವ ಕೋಣೆಯಲ್ಲೇ ಸ್ವತಃ ತಾವೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಉತ್ತಯ್ಯ ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದರಿಂದ ತನಗೆ ಕೊರೊನಾ ಬಂದಿದೆ ಎಂದು ಮನೆಯಲ್ಲಿದ್ದ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಪಿಐ ದಿವಾಕರ್ ಮತ್ತು ನಾಪೋಕ್ಲು ಠಾಣೆ ಎಸ್‍ಐ ಕಿರಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ