Film & EntertainmentKannada NewsLatest

*’ಮಾಫಿಯಾ’ ಎಫೆಕ್ಟ್: ಪ್ರಜ್ವಲ್ ಜೊತೆ ರೊಮ್ಯಾಂಟಿಕ್ ಹಾಡಿನಲ್ಲಿ ಕಾಣಿಸಿಕೊಂಡ ಅದಿತಿ ಪ್ರಭುದೇವ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಮಾಫಿಯಾ ಈಗಾಗಲೇ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಇದೀಗ ಪ್ರಜ್ವಲ್ ರೊಮ್ಯಾಂಟಿಕ್ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ತಾಯಿಯಾಗುತ್ತಿರುವ ಸಂಭ್ರಮವನ್ನು ಹಂಚಿಕೊಂಡಿದ್ದ ಅದಿತಿ ಇದೀಗ ಮಾಫಿಯಾ ಮೂಲಕ ಅಭಿಮಾನಿಗಳ ಮುಂದೆ ಬರಲಿ ಸಜ್ಜಾಗಿದ್ದಾರೆ.


ಅಂದಹಾಗೆ ಮಾಫಿಯಾ ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

Related Articles

ಸದ್ಯ ರಿಲೀಸ್ ಆಗಿರುವ ‘ತುಂಬಾನೇ ಕೇಳಲಾರೆ…’ ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಮಾಫಿಯಾ ಈಗಾಗಲೇ ಚಿತ್ರೀಕಣ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಸದ್ಯ ಟೀಸರ್ ಮತ್ತು ಹಾಡಿನ ಮೂಲಕ ಸದ್ದು ಮಾಡುತ್ತಿರುವ ಈ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರಕ್ಕೆ ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.

Home add -Advt

Related Articles

Back to top button