ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ:- ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜದಲ್ಲಿ “ಮ್ಯಾಗ್ನಂಟಫ್ ಇಂಡಿಯಾ ಪ್ರೈವೇಟ್ ಲಿ.” ಕಾರ್ಖಾನೆಯ ಪ್ರಥಮ ವರ್ಷದ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ, ಸಂಸ್ಥೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸುಸಂದರ್ಭದಲ್ಲಿ ಸಂಸ್ಥೆಯ ಸೈನ್ ಬೋರ್ಡ್ ಅನ್ನು ಲೋಕಾರ್ಪಣೆಗೊಳಿಸಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ನಾವು ಪ್ರಾರಂಭಿಸಿದ ಈ ಕಾರ್ಖಾನೆ, ಸುಮಾರು 200 ಕ್ಕೂ ಅಧಿಕ ಯುವಕರ ಬಾಳಿಗೆ ಆಶಾಕಿರಣವಾಗಿದೆ ಎಂಬ ಸಂತೃಪ್ತಿ ನಮಗಿದೆ. ಒಂದು ವರ್ಷದ ಸಂಭ್ರಮಾಚರಣೆಯಲ್ಲಿರುವ ಈ ಕಾರ್ಖಾನೆಯ ಯಶಸ್ವಿ ಮುನ್ನಡೆಗೆ ಕಾರಣರಾದ ಸರ್ವ ಸಿಬ್ಬಂದಿ, ಆಡಳಿತ ವರ್ಗಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದರು.
ಬಳಿಕ ಬಳಿಕ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಸಂಸ್ಥೆಯ ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಆಶಾಜ್ಯೋತಿ ವಿಶೇಷ ಮಕ್ಕಳ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ, ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ,ವ್ಯ ವಸ್ಥಾಪಕರಾದ ರಾಘವೇಂದ್ರ ಕಲಾಲ, ಸತೀಶ ಎಸ್ ವಿ. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ