Latest

*ಗ್ಯಾರಂಟಿ ಟಾರ್ಗೆಟ್ ಮಾಡಿದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಳಂಬವಾಗುತ್ತಿರುವ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ.

ಮೊದಲು ವಿಪಕ್ಷ ನಾಯಕ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಹುಡುಕಿ. ನಾವು ಕೊಟ್ಟ ಗ್ಯಾರಂಟಿಗಳನ್ನು ಜಾರಿಗೊಳಿಸೋದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಟ್ವೀಟ್ ಮೂಲಕ ತಿಳಿಸಿದೆ.

Home add -Advt

ಇದೇ ವೇಳೆ ಬಿಜೆಪಿ ಸೋಲಿನ ವಿಚಾರವಾಗಿ ಕಾಲೆಳೆದಿರುವ ಕಾಂಗ್ರೆಸ್, ಚುನಾವಣೆಯ ಸೋಲಿನ ಹೊಣೆಹೊರುವವರು ಯಾರು? ಎಂದು ಪ್ರಶ್ನಿಸಿದೆ.

ಚುನಾವಣೆಯಲ್ಲಿ ಹೀನಾಯವಾಗಿ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ನೀಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ? ಸೋಲಿನ ಹೊಣೆ ಯಾರದ್ದು? ಅಮಿತ್ ಶಾ ಅವರದ್ದೋ? ಬೊಮ್ಮಾಯಿ ಅವರದ್ದೋ/ ಮೋದಿಯವರದ್ದೋ? ನಳೀನ್ ಕಟೀಲ್ ಅವರದ್ದೋ? ಎಂದು ಪ್ರಶ್ನಿಸಿದೆ.

https://pragati.taskdun.com/basavaraj-bommaihavericongress-govtprediction/

Related Articles

Back to top button