ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಮಹಾಮೆಳಾವ್ ಗೆ ತಡೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ವಿಕಾಸ್ ಅಗಾಡಿ ಕಾರ್ಯಕರ್ತರು ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತರು ಬೆಳಗಾವಿಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ನತ್ತ ಧಾವಿಸಿ ಬರುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಮಹಾ ವಿಕಾಸ ಅಗಾಡಿ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕಾರ್ಯಕರ್ತರನ್ನು ತಡೆಯುತ್ತಿದ್ದಂತೆ ಕೆಲ ಕಾರ್ಯಕರ್ತರು ಸೇತುವೆಯ ಮೇಲೆ ನಿಂತು ಭಾಷಣ ಮಾಡಲು ಆರಂಭಿಸಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಬೀದರ್, ಬಾಲ್ಕಿ ಸಂಯುಕ ಮಾಹಾರಾಷ್ಟ್ರಕ್ಕೆ ಸೇರಿಸುವಂತೆ ಘೋಷಣೆ ಕೂಗಿದ್ದಾರೆ. ಈ ವೇಳೆ ಹಲವು ಮಹಾ ವಿಕಾಸ ಅಗಾಡಿ ಕಾರ್ಯಕರ್ತರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
*MES ಮಹಾಮೇಳಾವ್ ಗೆ ಬ್ರೇಕ್; ಪುಂಡಾಟಕ್ಕೆ ಖಾಕಿ ಗುನ್ನಾ*
https://pragati.taskdun.com/belagavimesmahamelavdsp-gadadireaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ