National

*ಮಹಾಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದ್ದಾರೆ.

ಪ್ರಯಾಗ್ ರಾಜ್ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೊದಿ ರಸ್ತೆ ಮಾರ್ಗದ ಮೂಲಕ ಮಹಾಕುಂಭಮೇಳ ಸ್ಥಳಕ್ಕೆ ತೆರಳಿದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಬಳಿಕ ಅರೈಲ್ ಘಾಟ್ ಮೂಲಕ ದೋಣಿ ವಿಹಾರದ ಮೂಲಕ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಸಂಗಮ್ ಘಾಟ್ ಗೆ ತೆರಳಿದರು. ಅಲ್ಲಿ ತ್ರಿವೇಣಿ ಸಂಗಮದಲ್ಲಿ ಅಮೃತ ತೀರ್ಥ ಸ್ನಾನ ಮಾಡಿದರು.

ತ್ರಿವೇಣಿ ಸಂಗಮದಲ್ಲಿ ಮೂರುಬಾರಿ ಮುಳುಗೆದ್ದು, ಇದೇ ವೇಳೆ ಕೆಲಕಾಲ ಕೈಯಲ್ಲಿ ಜಪಮಾಲೆ ಹಿಡಿದು ಮಂತ್ರಪಠಣ ಮಾಡಿದರು. ಬಳಿಕ ಗಂಗಾ ಮಾತೆಗೆ ನಮನ ಸಲ್ಲಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button