Karnataka NewsLatest

ಲಿಂಗಾಯತ ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೇಲ್ : 13ರಂದು ಯಡಿಯೂರಪ್ಪ ಶಂಕುಸ್ಥಾಪನೆ

ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ –

ವೀರಶೈವ ಲಿಂಗಾಯತ ಸಮುದಾಯದ ಬಡ ವಿದ್ಯಾರ್ಥಿನಿಯರಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ವಸತಿ ನಿಲಯ ನಿರ್ಮಿಸಲಾಗುತ್ತಿದ್ದು ಹಾಸ್ಟೇಲ್ ಕಟ್ಟಡದ ಶಂಕು ಸ್ಥಾಪನೆ ಏ.೧೩ರಂದು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹೇಳಿದರು.

ಬೆಳಗಾವಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡತನದ ಕಾರಣಕ್ಕೆ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯದ ಬಡ ವಿದ್ಯಾರ್ಥಿನಿಯರಿಗೆ ಹಾಸ್ಟೇಲ್ ನಿರ್ಮಿಸುವ ಗುರಿ ಸುಭಾಸ ನಗರದಲ್ಲಿ ಸುಮಾರು ೨೪ ಗುಂಟೆ ಜಾಗವಿದ್ದು ಇಲ್ಲಿ ಹಾಸ್ಟೇಲ್ ನಿಮೀಸಲಾಗುವುದು. ಆರಂಭದಲ್ಲಿ ೫೦ ವಿದ್ಯಾರ್ಥಿನಿಯರಿಗೆ ಹಾಸ್ಟೇಲ್‌ನಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣದ ಶಂಕುಸ್ಥಾಪನೆಯನ್ನು ಏ.೧೩ ರಂದು ಬೆಳಗ್ಗೆ ೮.೩೦ ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸುವರು. ಕಾರ್ಯಕ್ರಮದಲ್ಲಿ ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, , ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮೊದಲಾದ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

Home add -Advt

ಹಿರಿಯ ವಕೀಲ ಎಂ.ಬಿ.ಜಿರಲಿ ಮಾತನಾಡಿ, ವಸತಿ ನಿಲಯದಲ್ಲಿ ಕೇವಲ ವಿದ್ಯಾರ್ಥಿನಿಯರ ವಸತಿಗೆ ಮಾತ್ರ ಸೀಮಿತವಾಗಿಸದೆ ಉತ್ತಮ ಸಂಸ್ಕಾರವನ್ನು ಸಹ ನೀಡುವ ಉದ್ದೇಶವಿದೆ ಎಂದರು.

ಪ್ರತಿಗ್ರಾಮದಲ್ಲಿಯೂ ಡಿಜಿಟಲ್ ಗ್ರಂಥಾಲಯ ಸ್ಥಾಪನೆ: ಉಮೇಶ ಕತ್ತಿ

Related Articles

Back to top button