National

*ಮಹಾಕುಂಭಮೇಳಕ್ಕೆ ತೆರಳುವಾಗ ಭೀಕರ ಅಪಘಾತ: ರಾಜ್ಯದ ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಟಿಟಿ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕರ್ನಾಟಕದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Home add -Advt

ಮೃತ ಮಹಿಳೆ ಬೆಂಗಳೂರು ಮೂಲದವರಾಗಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಒರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಿಟಿ ವಾಹನ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತ ದೇಹ ಸ್ಥಳಾಂತರಕ್ಕೆ ಹಾಗೂ ಗಾಯಾಳುಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡುವಂತೆ ಸರ್ಕಾರಕ್ಕೆ ಕುಟುಂಬದವರು ಮನವಿ ಮಾಡಿದ್ದಾರೆ.

Related Articles

Back to top button