Belagavi NewsBelgaum NewsPolitics

*ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ*

ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.

ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನ ಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Home add -Advt

Related Articles

Back to top button