Politics

*ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ತೀವ್ರ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಸುದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

Home add -Advt

ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ.

ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ತಿಳಿಸಿದ್ದಾರೆ.

Related Articles

Back to top button