Belagavi NewsBelgaum NewsKarnataka NewsLatestPolitics

*50 ಲಕ್ಷ ರೂ. ವೆಚ್ಚದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೀಣೆ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಮಹಾಲಕ್ಷ್ಮೀ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಗ್ರಾಮದ ಭಕ್ತಾದಿಗಳ ಆರಾಧ್ಯ ದೈವ ಶ್ರೀ ಮಹಾಲಕ್ಷ್ಮೀ ದೇವಿಯ ಭವ್ಯ ಮಂದಿರ ನಿರ್ಮಾಣಕ್ಕಾಗಿ ಗ್ರಾಮಸ್ಥರು ಕೋರಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಅನುದಾನ ಒದಗಿಸಲಾಗಿದೆ. ನಿಗದಿತ ಸಮಯದೊಳಗೆ ಅತ್ಯಂತ ಸುಂದರವಾಗಿ ದೇವಸ್ಥಾನದ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.


ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಮಂದಿರಗಳನ್ನು ಕಳೆದ 7 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ಯಾವುದೇ ಭೇದ ಭಾವ ಮಾಡದೆ ಎಲ್ಲ ಗ್ರಾಮಗಳಲ್ಲಿ ಸಮಾನವಾಗಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಕ್ಷೇತ್ರದ ಜನರ ಸಂತೋಷದಲ್ಲೇ ನಾನು ಸಹ ಸಂತೋಷವನ್ನು ಕಾಣುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸುವ ಸಂಕಲ್ಪ ಹೊಂದಿದ್ದೇನೆ ಎಂದು ಹೆಬ್ಬಾಳಕರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಮಾರುತಿ ಪಾಟೀಲ, ಬಾಳು ದೇಸೂರಕರ್, ಮಾರುತಿ ಡುಕ್ರೆ, ಮಧುಕರ್ ಪಾಟೀಲ, ಹೇಮಂತ ಪಾಟೀಲ, ನಿಂಗಪ್ಪ ಪಾಟೀಲ, ನಾಣು ಪಾಟೀಲ, ಜಯವಂತ ಪಾಟೀಲ, ಅಪ್ಪುರಾಯ್ ಗುರವ್, ಭೈರು ಡುಕ್ರೆ, ಪುಣ್ಣಪ್ಪ ದಳ್ವಿ, ಕಲ್ಲಪ್ಪ ನಾಯ್ಕ, ವೀರ ಪಾಟೀಲ, ವಿನಾಯಕ ಪಾಟೀಲ, ರಾಜೇಂದ್ರ ಪಾಟೀಲ, ಕೃಷ್ಣ ಗುರವ್, ಲಕ್ಷ್ಮಣ ಸಾತೇರಿ, ಕೃಷ್ಣ ಪಾಟೀಲ, ವಿಠ್ಠಲ ಪಾಟೀಲ, ರಾಜು ಪಾಟೀಲ, ವಿಲಾಸ್ ಪಾಟೀಲ, ಆಶಿಷ್ ಪಾಟೀಲ, ನಿವೃತ್ತಿ ಡುಕ್ರೆ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button