Belagavi NewsBelgaum NewsKannada NewsKarnataka NewsPolitics

*ಯೋಧನ ನಿಧನಕ್ಕೆ ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅನಾರೋಗ್ಯದಿಂದ ಮೃತರಾದ ಗೋಕಾಕ್ ತಾಲೂಕಿನ ಡುಮ್ಮಉರಬಿನಹಟ್ಟಿಯ ವೀರಯೋಧ ಮಹಾಂತೇಶ ಬ. ಹುಬ್ಬಳ್ಳಿ (31) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.

ಮಹಾಂತೇಶ ಅವರು ಅನಾರೋಗ್ಯದಿಂದ ದೆಹಲಿಯ ಆಸ್ಪತ್ರೆಯಲ್ಲಿ 2 ದಿನಗಳ ಹಿಂದೆ ನಿಧನರಾಗಿದ್ದಾರೆ. ಇಂದು ಯೋಧನ ಪಾರ್ಥಿವ ಶರೀರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಆಗಮಿಸಿದ್ದ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಸಚಿವರು, ಯೋಧನ ಆತ್ಮಕ್ಕೆ ಶಾಂತಿ ಕೋರಿದರು.


ಮದ್ರಾಸ್ ಇಂಜಿನಿಯರಿಂಗ್ ಗ್ರುಪ್ (MEG) ನ ಪಂಜಾಬ್ ಯುನಿಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ ಮಹಾಂತೇಶ ಚಿಕ್ಕ ವಯಸ್ಸಿನಲ್ಲಿಯೇ ಮೃತರಾಗಿರುವುದು ದುರ್ದೈವದ ಸಂಗತಿ, ಅವರ ನಿಧನದ ಸುದ್ದಿ ಅತೀವ ನೋವುಂಟು ಮಾಡಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button