ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಿರ್ಮಲಾ ಸೀತಾರಾಮನ್ ಅವರು ಜನಸಾಮಾನ್ಯರಿಗೆ ಹೊರೆಯಾಗದಂತೆ ತೆರಿಗೆಗಳನ್ನು ವಿಧಿಸದೆ ಕೃಷಿ, ಗ್ರಾಮೀಣಾಭಿವೃದ್ದಿ, ಮೂಲಭೂತ ಸೌಕರ್ಯಗಳಿಗೆ ಬಜೆಟನಲ್ಲಿ ಒತ್ತು ನೀಡಿದ್ದಾರೆ. ಕುಸಿಯುತ್ತಿರುವ ಜಿಡಿಪಿ ದರವನ್ನು ಹೆಚ್ಚಳ ಮಾಡಲು ತೆರಿಗೆ ನೀತಿಯನ್ನು ಸರಳೀಕರಣಗೊಳಿಸಿ ನಿರುದ್ಯೋಗ ನಿವಾರಿಸಲು ಹೊಸ ಉದ್ಯಮಗಳಿಗೆ ಬಂಡವಾಳ ಹೂಡಲು ಕೊಡುಗೆಗಳನ್ನು ನೀಡಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಪ್ರತಿಕ್ರಿಯಿಸಿದ್ದಾರೆ..
ಒಟ್ಟಾರೆ ದೇಶದ ಅಭಿವೃದ್ದಿ, ರಕ್ಷಣೆ, ಜನಸಾಮಾನ್ಯರ ಹಿತ ಕಾಪಾಡುವಲ್ಲಿ ಬಜೆಟ್ ನಲ್ಲಿ ಒತ್ತುನೀಡಿ ಒಂದು ಉತ್ತಮ ಬಜೆಟ್ ಮಂಡಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ