Kannada NewsKarnataka News

ಫಸಲ್ ವಿಮಾ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ -ಕವಟಗಿಮಠ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜೊತೆಗೆ ರೈತರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ವಿಧಾನಪರಿಷತ್ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯೋಜನೆ ಕುರಿತು ಮಂಗಳವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿದ ಕವಟಗಿಮಠ,  ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಅನುಷ್ಠಾನದ ಕುರಿತು ವಿವರವಾದ ಮಾಹಿತಿ ಪಡೆದರು.

ವಿಮೆಯ ಅನುಷ್ಠಾನದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ  ಪಡೆದ ಅವರು, ೨೦೧೯-೨೦ನೇ ಸಾಲಿನ ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ ಜಮೆ ಆದ ವಿಮಾ ಮೊತ್ತ ಹಾಗೂ ಆಗುತ್ತಿರುವ ಅಡೆತಡೆಗಳ ಬಗ್ಗೆ ಅವಲೋಕನ ನಡೆಸಿದರು.

ವಿಮೆ ಮೊತ್ತವನ್ನು ಆದಷ್ಟು ಶೀಘ್ರವಾಗಿ ರೈತರಿಗೆ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯೋಜನೆಯಲ್ಲಿ ರೈತರು ಸ್ವಪ್ರೇರಣೆಯಿಂದ ಭಾಗವಹಿಸುವಂತೆ ಇಲಾಖೆಯು ಪ್ರೇರೆಪಿಸಬೇಕು.  ಈಗಾಗಲೇ ರೈತರ ಖಾತೆಗಳಿಗೆ ಜಮಾ ಆಗಿರುವ ಮೊತ್ತ ಮತ್ತು ರೈತರ ಸಂಖ್ಯೆ ಬಾಕಿ ಇರುವ ಪ್ರಕರಣಗಳ ಬಗ್ಗೆ ವಿವರ ಮಾಹಿತಿ ಒದಗಿಸಿ ಎಂದು ಸೂಚಿಸಿದರು.

Home add -Advt

Related Articles

Back to top button