*ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಮಹಾಂತೇಶ್ ಉಳ್ಳಾಗಡ್ಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಂಬಾಕು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮದ ಕುರಿತು ಮಕ್ಕಳ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿತ್ತು.
ಗೋಕಾಕ್ ತಾಲೂಕಿನ ಪ್ರಾಥಮಿಕ ಶಾಲೆ ಶಿಲ್ತಿಭಾವಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗಿಯ ಸಂಯೋಜಕರಾದ ಮಹಾಂತೇಶ್ ಉಳ್ಳಾಗಡ್ಡಿ ಅವರು ಮಾತನಾಡಿ, ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲವಾರು ರೀತಿಯ ದುಷ್ಪರಿಣಾಮ ಬೀರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಅಂಶಗಳಿರುತ್ತವೆ. ಹೀಗಾಗಿ ವಿದ್ಯಾರ್ಥಿಗಳು ತಂಬಾಕು ಸೇವನೆ ತ್ಯಜಿಸಬೇಕು ಹಾಗೂ ಶಿಲ್ತಿಭಾವಿ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಆಯ್ಕೆ ಮಾಡಿದ್ದು, ಇದಕ್ಕಾಗಿ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ.
ತಂಬಾಕು ಮುಕ್ತ ಗ್ರಾಮ ಸಾರ್ವಜನಿಕ ಆರೋಗ್ಯ ಸುಧಾರಣೆಗಾಗಿ, ಸಮುದಾಯ ಸಹಭಾಗಿತ್ವದೊಂದಿಗೆ ತಂಬಾಕಿನಿಂದ ಮುಕ್ತವಾದ ವಾತಾವರಣ ನಿರ್ಮಾಣ ಗುರಿ ಹೊಂದಲಾಗಿದೆ. ಜೊತೆಗೆ ತಂಬಾಕಿನಿಂದ ಆಗುವ ಕ್ಯಾನ್ಸರ್, ಹೃದಯ ಸಂಬಂಧಿರೋಗಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಿಗೆ ತಿಳಿಸುವುದು ಸೇರಿದಂತೆ cotpa ಕಾಯ್ದೆ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಗ್ರಾಮದ ಎಲ್ಲ ಮುಖಂಡರು ಯುವಕ ಮಿತ್ರರು ಸಾರ್ವಜನಿಕರು ಸಹಕರಿಸಿ ತಂಬಾಕು ಮುಕ್ತ ಗ್ರಾಮ ನಾಗಿಸಲು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಡಾ. ಶ್ವೇತಾ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮವನ್ನು ಅರಿತು ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ ಎಂದು ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಸೇವಕರಾದ ಕು.ಕವಿತಾ ರಾಜಣ್ಣವರ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಎಂ. ಜಿ. ಸೆರೆವಕಾಸ, ಮಹಿಳಾ ಮತ್ತು ಮಕ್ಕಳ ಮೇಲ್ವಿಚಾರಕರು ಸಂಕನ್ನವರ್, ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಶಾಲೆ ಮುಖ್ಯೋಪಾಧ್ಯರು ಸಭೆಯಲ್ಲಿ ಹಾಜರಾಗಿದ್ದರು.




