Kannada NewsKarnataka NewsLatest

*ಕಾಲೇಜು ಆವರಣದಲ್ಲೇ ಪ್ರೊಫೇಸರ್ ಕಾರು ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜು ಆವರಣದಲ್ಲಿಯೇ ಭೀಕರ ಅಪಘಾತ ಸಂಭವಿಸಿದ್ದು, ಪ್ರೊಫೇಸರ್ ಓರ್ವರ ಕಾರು ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿಗಳು ಸೇರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಬೆಂಗಳೂರಿನ ಮಹಾರಾಣಿ ಕಾಲೇಜಿನ ಆವರನದಲ್ಲಿ ಈ ಅಪಘಾತ ಸಂಭವಿಸಿದೆ. ಮಹಾರಾಣಿ ಕಾಲೇಜಿನ ಇಂಗ್ಲೀಷ್ ಪ್ರೊಫೇಸರ್ ನಾಗರಾಜ್ ಓವರ್ ಸ್ಪೀಡ್ ನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಲೇಜಿಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಮ್ಯೂಸಿಕ್ ಟೀಚರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಕಾರು ಅಪ್ಪಳಿಸಿದೆ.

ಅಪಘಾತದಲ್ಲಿ ಅಶ್ವಿನಿ ಎಂಬ ವಿದ್ಯಾರ್ಥಿನಿಯ ತಲೆಯ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಇನ್ನೋರ್ವ ವಿದ್ಯಾರ್ಥಿನಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮ್ಯೂಸಿಕ್ ಟೀಚರ್ ಜ್ಯೋತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button