Kannada NewsLatestNational

*ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ; ನಾಲ್ವರು ಸಾವು; 13 ಜನರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆ ಮಹಾರಾಷ್ಟ್ರದ ವಿವಿಧೆಡೆ ದುರಂತ ಸಂಭವಿಸಿದ್ದು, ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. 13 ಜನರು ಕಾಣೆಯಾಗಿದ್ದಾರೆ.

ಪುಣೆಯ ಚಕನ್ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ವಾಕಿ ಖುರ್ದ್ ನ ಭಾಮಾ ನದಿಯಲ್ಲಿ ಇಬ್ಬರು ಹಾಗೂ ಶೆಲ್ ಪಿಂಪಾಲ್ ಗಾಂವ್ ನಲ್ಲಿ ಓರ್ವರು ಕೊಚ್ಚಿ ಹೋಗಿದ್ದಾರೆ. ಪುಣೆ ಗ್ರಾಮೀಣ ಪ್ರದೇಶದ ಬಿರ್ವಾಡಿಯಲ್ಲಿ ಮತ್ತೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಈವರೆಗೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ.


Home add -Advt

Related Articles

Back to top button