*ಸೋಲಿನ ಹೊಣೆಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ ಫಲಿತಾಂಶ. ರಾಜ್ಯದ ಜನತೆಯ ತೀರ್ಮಾನವನ್ನು ಗೌರವಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸೋಲಿನ ಹೊಣೆಯನ್ನು ನಾನೇ ಸಂಪೂರ್ಣವಾಗಿ ಹೊತ್ತುಕೊಳ್ಳುತ್ತೇನೆ. ಜನರ ತೀರ್ಮಾನಕ್ಕೆ ನಾವು ತಲೆ ಬಾಗುತ್ತೇವೆ ಎಂದರು.

Home add -Advt

ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಆಡಳಿತ ನೀಡಿದ್ದಾರೆ. ಆದಾಗ್ಯೂ ಜನರು ವ್ಯತಿರಿಕ್ತ ಫಲಿತಾಂಶ ನೀಡಲು ಕಾರಣವೇನು ತಿಳಿದಿಲ್ಲ. ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುವುದು. ಮುಂದಿನ ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಪಕ್ಷ ಸಂಗಹ್ತನೆ ಇನ್ನಷ್ಟು ಗಟ್ಟಿಗೊಳಿಸುವುದಾಗಿ ತಿಳಿಸಿದರು.

https://pragati.taskdun.com/cm-basavaraj-bommairesignvidhanasabha-election/

Related Articles

Back to top button