Kannada NewsLatestNational

*BREAKING: ಮಹಾರಾಷ್ಟ್ರದಲ್ಲಿ ಕಾರು ಅಪಘಾತ: ರಾಜ್ಯದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದಲ್ಲಿ ಉಮ್ಮರ್ಗದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಾಜ್ಯದ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ಬೀದರ್ ಮೂಲದ ನಾಲ್ವರು ಸ್ನೇಹಿತರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಕುಮಾರ್, ರತಿ ಕಾಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದು, ಮೃತರು ಬೀದರ್ ನ ಖಾಶಿಂಪುರ ನಿವಾಸಿಗಳು.

ಹಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಉಮ್ಮರ್ಗ ಬಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button