Kannada NewsKarnataka NewsLatest

*ಕಂತೆ ಕಂತೆ ಹಣ ಜಪ್ತಿ ಮಾಡಿದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಲಲ್ಲಿ ಲಕ್ಷ ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

Home add -Advt

ಮೈಸೂರಿನ ಕಾಳಿದಾಸನಹುಂಡಿ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 81.90 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಬೆಂಗಳೂರಿನ ರಾಯನ್ ಸರ್ಕಲ್ ಬಳಿ 20 ಲಕ್ಷ ಹಣ ಜಪ್ತಿ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ 43.34 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Related Articles

Back to top button