ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತೆ ಗಡಿ ವಿಚಾರವಾಗಿ ಕ್ಯಾತೆ ತೆಗೆದಿದ್ದು, ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸೇರಿ ಮರಾಠಾ ಭಾಷಿಕರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಅಜಿತ್ ಪವಾರ್ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರ ರಚನೆಯಾಗಿ 65ಕ್ಕೂ ಹೆಚ್ಚು ವರ್ಷ ಕಳೆದಿದೆ. ಕರ್ನಾಟಕದ ಮರಾಠಿ ಭಾಷಿಕರ ಪ್ರದೇಶಗಳು ಇನ್ನೂ ರಾಜ್ಯಕ್ಕೆ ಸೇರಿಲ್ಲ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥ ಮಾಡಲು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸಂಯುಕ್ತ ಮಹಾರಾಷ್ಟ್ರ ರಚನೆಯಾಗುವವರೆಗೂ ವಿರಮಿಸಲ್ಲ, ನಮಗೆ ನ್ಯಾಯ ಒದಗಿಸಿ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಒಟ್ಟಾರೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಮಹಾರಾಷ್ಟ್ರ ನಾಯಕರಿಂದ ಮತ್ತೆ ಗಡಿ ಕ್ಯಾತೆ ಆರಂಭವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ