ಪ್ರಗತಿವಾಹಿನಿ ಸುದ್ದಿ: ನಿನ್ನೆ ಹೊರ ಬಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿತು. ಮಹಾರಾಷ್ಟ್ರದಲ್ಲಿ ಕೂಡಾ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ಹಾಗಾಗಿ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮಹಾರಾಷದಲ್ಲಿ 19 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ. ಅಲ್ಲದೇ ನೈತಿಕ ಹೊಣೆಹೊತ್ತು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತಾಗಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಪಕ್ಷಕ್ಕಾಗಿ ದುಡಿಯಲು ಬಯಸುತ್ತೇನೆ. ನನ್ನನ್ನು ಎಲ್ಲಾ ಹುದ್ದೆಗಳಿಂದ ಕೆಳಗಿಳಿಸಿ ಎಂದು ಹೈಕಮಾಂಡ್ಗೆ ಫಡ್ನವೀಸ್ ಮನವಿ ಮಾಡಿರುವ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಇನ್ನು ಕಳೆದ ಬಾರಿ ನೋಡುವುದಾದರೆ 23 ಸ್ಥಾನಗಳಿಂದ ಈ ಬಾರಿ ಕೇವಲ 9 ಸ್ಥಾನಗಳಿಗೆ ಬಿಜೆಪಿ ಇಳಿದಿದ್ದು, ರಾಜ್ಯದ ಬಿಜೆಪಿ ನಾಯಕತ್ವದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ