
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಏಕನಾಥ್ ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಮುಂಬೈ ಪೊಲೀಸರಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದಾನೆ ಎನ್ನಲಾಗಿದೆ.
ಗೋರೆಗಾಂವ್, ಜೆ.ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯ ಮಂತ್ರಾಲಯದ ನಿಂಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶಗಳು ಬಂದಿವೆ. ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಆರೋಪಿ ಪತ್ತೆಗೆ ಶೋಧ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ