*ಮಹಾರಾಷ್ಟ್ರ ಚುನಾವಣೆ: ಅಕ್ಷಯ್ ಕುಮಾರ್, ಸಚಿನ್ ತೆಂಡೂಲ್ಕರ್, ಆರ್ ಬಿಐ ಗವರ್ನರ್ ಸೇರಿ ಘಟಾನುಘಟಿ ನಾಯಕರಿಂದ ಮತದಾನ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಚುರುಕುಗೊಂಡಿದೆ. ಎಲ್ಲಾ 288 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ರಾಜಕೀಯ ನಾಯಕರು, ಸಿನಿ ತಾರೆಯರು, ಕ್ರಿಕೆಟ್ ಆಟಗಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ಮುಂಜಾನೆಯೇ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ನಟ ಅಕ್ಷಯ್ ಕುಮಾರ್, ಸೋನು ಸೂದ್, ಕ್ರಿಕೆಟ್ ದಿಗ್ಗಜ ಸಚಿನ್ ತಂಡೂಲ್ಕರ್, ಎನ್ ಸಿಪಿ ನಾಯಕ ಶರದ್ ಪವಾರ್, ಆರ್ ಎಸೆಸ್ ಮುಖಂಡ ಮೋಹನ್ ಭಾಗವತ್, ಅಜಿತ್ ಪವಾರ್, ಸುಪ್ರಿಯಾ ಸುಳೆ ಸೇರಿದಂತೆ ಹಲವಾರು ನಾಯಕರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ಮತ ಚಲಾಯಿಸಿದ ಬಳಿಕ ಮಾತನಾಡಿದ ನಟ ಅಕ್ಷಯ್ ಕುಮಾರ್, ಮತದಾನಕ್ಕೆ ಮತಗಟ್ಟೆಗಳಲ್ಲಿ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಹಿರಿಯ ನಾಗರಿಕರಿಗೆ ಮತದಾನಕ್ಕೆ ಒಳ್ಳೆ ಸೌಕರ್ಯವನ್ನು ಕಲ್ಪಿಸಲಾಗಿದೆ. ಪ್ರತಿಯೊಬ್ಬರೂ ಮತಗಟ್ಟೆಗೆ ಬಂದು ವೋಟ್ ಮಾಡಿ ಎಂದು ತಿಳಿಸಿದರು.
ಇದೇ ವೇಳೆ ನಟ ಸೋನು ಸೂದ್, ಮತದಾನ ಪ್ರತಿಯೊಬ್ಬರ ಕರ್ತವ್ಯ. ಇದು ದೇಶಕ್ಕೆ ಮಹತ್ವದ್ದು, ಎಲ್ಲರೂ ಮತದಾನ ಮಾಡುವಂತೆ ಕರೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ