ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರಾ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೋಟೆಲ್ ನಲ್ಲಿ ಸಂಗ್ರಹಿಸಿಟ್ಟಿದ್ದ ಕೋಟ್ಯಂತರ ರೂಪಾಯಿ ಅಕ್ರಮ ಹಣವನ್ನು ವಶಕ್ಕೆ ಪಡೆದಿದ್ದಾರೆ.
ನಾಸಿಕ್ ನ ಹೋಟೆಲ್ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.98 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಅಕ್ರಮವಾಗಿ ಹಣ ಸಂಗ್ರಹಿಸಿರುವುದು ಪತ್ತೆಯಾಗಿದೆ. ಸೂಕ್ತ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ 1.98 ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿದೆ. ತನಿಖೆ ಮುಂದುವರೆದಿದೆ ಎಂದು ನಾಸಿಕ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಲಾಲ್ ಶರ್ಮಾ ತಿಳಿಸಿದ್ದಾರೆ.
ಚುನಾವಣಾ ಅಕ್ರಮಕ್ಕೆ ಸಂಬಂಧಿಸಿಂತೆ ನ.12ರಂದು ನವಿ ಮುಂಬೈನ ಮನೆಯೊಂದರಲ್ಲಿ2.5 ಕೋಟಿ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ