ಪ್ರಗತಿವಾಹಿ ಸುದ್ದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೊಲ್ಲಾಪುರದಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರು ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರ ದಂಡೇ ಸೊಲ್ಲಾಪುರಕ್ಕೆ ಆಗಮಿಸಿದೆ.
ಸೊಲ್ಲಾಪುರ ಏರ್ ಪೋರ್ಟ್ ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಕಸ್ಮಿಕವಾಗಿ ಮುಖಾಮುಖಿಯಾದರು. ಉಭಯ ನಾಯಕರು ಕುಶಲೋಪರಿ ವಿಚಾರಿಸಿದರು.
ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಹಾಗೂ ಸಂಸದರಾದ ಪ್ರಣತಿ ಶಿಂಧೆ ಅವರು ಸ್ವಾಗತ ಕೋರಿದರು. ಸಚಿವರಾದ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಮಹಾರಾಷ್ಟ್ರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಧನಗರ್ ಸಮುದಾಯದ ಮುಖಂಡರು ನಾಂದೇಡ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಇನ್ನು ಚುನಾವಣಾ ಪ್ರಚಾರಕ್ಕಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಿಂದ ಸೊಲ್ಲಾಪುರಕ್ಕೆ ಆಗಮಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಸೊಲ್ಲಾಪುರಕ್ಕೆ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವ ಎಂ.ಬಿ.ಪಾಟೀಲ್, ಸಚಿವೆ ಲಕ್ಷ್ಮೀ ಹೆಬ್ಬಳ್ಕಾರ್ ಇಂದು ಸೊಲ್ಲಾಪುರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲಾಥೋರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ