Uncategorized

*ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ; ಸಿಎಂ ಶಿಂಧೆ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ-ಶಿವಸೇನೆ ಸರ್ಕಾರದ ಜೊತೆ ಎನ್ ಸಿಪಿಯ ಅಜಿತ್ ಪವಾರ್ ಕೈಜೋಡಿಸಿದ್ದಾರೆ. ಈ ಮೂಲಕ ಮಹಾ ಮೈತ್ರಿ ಸರ್ಕಾರಕ್ಕೆ ಎನ್ ಸಿಪಿ ಪಡೆ ಬೆಂಬಲ ನೀಡಿದೆ.

ಶರದ್ ಪವಾರ್ ವಿರುದ್ಧ ಸಿಡಿದೆದ್ದಿರುವ ಅಜಿತ್ ಪವಾರ್, 22 ಶಾಸಕರ ಬಲ ತನಗಿರುವುದಾಗಿ ಹೇಳಿಕೆ ನೀಡಿದ್ದು, ಇದೀಗ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.

ಅಜಿತ್ ಪವಾಸ್ ಗೆ ಮಹಾರಾಷ್ರ ಡಿಸಿಎಂ ಹುದ್ದೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಬಲದ ಬೆನ್ನಲ್ಲೇ ಸಿಎಂ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಹಾಗೂ ಅಜಿತ್ ಪವಾರ್ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button