Latest

*ಭೀಕರ ಅಪಘಾತ; ಇಬ್ಬರು ಕಾಲೇಜು ವಿದ್ಯಾರ್ಥಿಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಡೆದಿದೆ.

ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ನಿಯಂತ್ರಣ ಕಳೆದುಕೊಂಡು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಮೃತ ವಿದ್ಯಾರ್ಥಿಗಳು ಸಾಲಿಗ್ರಾಮದವರಾಗಿದ್ದು, 19 ವರ್ಷದ ಸಮಿತ್ ಕುಮಾರ್ ಹಾಗೂ ವಾಗೀಶ್ ಕೆದ್ಲಾಯ ಎಂದು ತಿಳಿದುಬಂದಿದೆ. ಉಡುಪಿಯ ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಬ್ಬರೂ ವಿದ್ಯಾಭ್ಯಾಸ ಮಡುತ್ತಿದ್ದರು.

ಬ್ರಹ್ಮಾವರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಮತಾಂತರ ಯತ್ನ ಶಂಕೆ: ತಡೆದು ಪ್ರತಿಭಟಿಸಿದ ವಿಶ್ವ ಹಿಂದೂ ಪರಿಷತ್

Related Articles

Back to top button