Kannada NewsLatest

ಕನ್ನಡಿಗರ ಹೋರಾಟಕ್ಕೆ ಬೆದರಿದ ಮಹಾ ಸಚಿವರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ರದ ಸಚಿವದ್ವಯರು ಬೆಳಗಾವಿಗೆ ಭೇಟಿ ನೀಡಲು ಮುಂದಾಗಿದ್ದರು. ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಇಂದು ಪ್ರದಕ್ಷಿಣೆ ಹಾಕುತ್ತೇವೆ ಅದ್ಯಾರು ತಡೆಯುತ್ತಾರೆ ನೋಡೋಣ ಎಂದು ಸವಾಲು ಹಾಕಿದ್ದರು. ಆದರೆ ಈಗ ಮಹಾ ಸಚಿವರ ಬೆಳಗಾವಿ ಭೇಟಿ ಕ್ಯಾನ್ಸಲ್ ಆಗಿದೆ.

ಸಚಿವರಾದ ಚಂದ್ರಕಾಂತ್ ಪಾಟೀಲ್ ಹಾಗೂ ಶಂಭುರಾಜ್ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರ ಬೆಳಗಾವಿ ಭೇಟಿಗೆ ತಡೆ ನೀಡಲಾಗಿದೆ.

ಬೆಳಗಾವಿ ಭೇಟಿ ರದ್ದಾಗಿದೆ ಎಂದು ಮಹಾರಾಷ್ಟ್ರದ ಸಚಿವ ಶಂಭುರಾಜ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಭೇಟಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ. ಹಾಗಾಗಿ ಭೇಟಿ ರದ್ದು ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಒಟ್ಟಾರೆ ಕನ್ನಡ ಪರ ಸಂಘಟನೆಗಳ ಹೋರಾಟ, ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ ಕ್ರಮದ ಬೆನ್ನಲ್ಲೇ ಬೆದರಿದ ಮಹಾರಾಷ್ಟ್ರ ಸಚಿವರು ಬೆಳಗಾವಿ ಭೇಟಿಯಿಂದ ಹಿಂದೆ ಸರಿದಿದ್ದಾರೆ.

Home add -Advt

‘ಮಹಾ’ಮಂತ್ರಿಗಳ ಬೆಳಗಾವಿ ಭೇಟಿ ರದ್ದು: ಬಾಲ ಮುದುಡಿಕೊಂಡ ಕಿಡಿ ವೀರರು

 

https://pragati.taskdun.com/maharashtra-border-incharge-ministers-visit-to-belagavi-cancelled/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button