
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾರಾಷ್ಟ್ರ ಮಾಜಿ ಸಿಎಂ ವಿಲಾಸರಾವ್ ದೇಶಮುಖ್ ಅವರ ಪುತ್ರ, ಶಾಸಕ ಧೀರಜ್ ದೇಶಮುಖ್ ಅವರು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೆಟಿಯಾಗಿ ಅಭಿನಂದಿಸಿದರು.
ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾದ ಶಾಸಕ ಧೀರಜ್ ದೇಶ್ ಮುಖ್, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.




