LatestNational

*ಹೆಂಡತಿ ಜೊತೆ ಜಗಳ: ಅವಳಿ ಮಕ್ಕಳ ಕತ್ತು ಸಿಳಿದ ರಾಕ್ಷಸ*

ಪ್ರಗತಿವಾಹಿನಿ ಸುದ್ದಿ : ಹೆಂಡತಿ ಜೊತೆ ಜಗಳ ಮಾಡಿಕೊಂಡ ಪತಿ ತನ್ನ ಇಬ್ಬರು ಅವಳಿ ಮಕ್ಕಳ ಕತ್ತು ಸಿಳಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದು ಹೋಗಿದೆ.

ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್‌ ಚವಾಣ್ ಕೊಲೆ ಆರೋಪಿ, ಚವಾಣ್ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದಾಗ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಜಗಳದ ಬಳಿಕ ಆತನ ಪತ್ನಿ ತನ್ನ ಹೆತ್ತವರ ಮನೆಗೆ ಹೋಗಿದ್ದಾರೆ. ಆದರೆ, ಚವಾಣ್ ತನ್ನ ಹೆಣ್ಣುಮಕ್ಕಳೊಂದಿಗೆ ಏಕಾಂಗಿಯಾಗಿ ಪ್ರಯಾಣ ಮುಂದುವರಿಸಿದ್ದಾನೆ. ನಂತರ ಮಕ್ಕಳನ್ನು ಬುಲ್ಡಾನಾ ಜಿಲ್ಲೆಯ ಅಂಚಾರ್ವಾಡಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೊನೆಗೆ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಮಕ್ಕಳ ಶವಗಳನ್ನು ವಶಪಡಿಸಿಕೊಂಡಿದೆ. ಪ್ರಾಥಮಿಕ ತನಿಖೆಯಲ್ಲಿ ಶವಗಳು ಭಾಗಶಃ ಸುಟ್ಟುಹೋಗಿವೆ ಎಂದು ತಿಳಿದುಬಂದಿದೆ. 

ಕೊಲೆ ನಂತರ ಚವಾಣ್‌ ಬೆಂಕಿ ಹಚ್ಚುವ ಮೂಲಕ ಸಾಕ್ಷ್ಯಗಳನ್ನು ನಾಶಮಾಡಲು ಪ್ರಯತ್ನಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆದಾಗ್ಯೂ, ಪೊಲೀಸ್ ಅಧಿಕಾರಿಗಳು ತನಿಖೆಯ ಈ ಅಂಶವನ್ನು ಇನ್ನೂ ದೃಢಪಡಿಸಿಲ್ಲ. ಮಕ್ಕಳನ್ನು ಕೊಂದ ಬಳಿಕ ಸುಟ್ಟು ಹಾಕಲಾಗಿದೆಯೇ ಎಂಬುದು ವಿಧಿವಿಜ್ಞಾನ ಪರೀಕ್ಷೆ ಮತ್ತು ಮರಣೋತ್ತರ ಪರೀಕ್ಷೆ ನಂತರ ತಿಳಿಯಲಿದೆ.

Home add -Advt

Related Articles

Back to top button