ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಪಾಲ್ಘರ್ ಜಿಲ್ಲೆಯಲ್ಲಿ ವ್ಯಾನ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 3.70 ಕೋಟಿಗೂ ಅಧಿಕ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಪಾಲ್ಘರ್ ಜಿಲ್ಲೆಯ ವಡಾದಲ್ಲಿ 30.70 ಕೋಟಿಗೂ ಹೆಚ್ಚು ನಗದು ಹಣ ಜಪ್ತಿ ಮಾಡಲಾಗಿದೆ.
ನವಿ ಮುಂಬೈ ಮೂಲದ ಕಂಪನಿಯಿಂದ ಪಾಲ್ಘರ್ ನ ವಿಕ್ರಮಗಡಕ್ಕೆ ಹಣವನ್ನು ವ್ಯಾನ್ ನಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳು ಇಲ್ಲದ ಕಾರಣಕ್ಕೆ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಜಪ್ತಿ ಮಾಡಿದ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ