
ಪ್ರಗತಿವಾಹಿನಿ ಸುದ್ದಿ; ಮುಂಬೈ: ಒಂದೇ ಜಿಲ್ಲೆಯ 8,000 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ 8 ಸಾವಿರ ಮಕ್ಕಳು ಸೋಂಕಿಗೆ ಒಳಗಾಗಿದ್ದು, ಸಾಂಗ್ಲಿಯಲ್ಲಿ ಮಕ್ಕಳಿಗಾಗಿಯೇ ವಿಶೇಷ ಕೋವಿಡ್ ವಾರ್ಡ್ ವ್ಯವಸ್ಥೆ ಮಾಡಲಾಗಿದೆ 8 ಸಾವಿರ ಮಕ್ಕಳ ಜೊತೆಗೆ ಹದಿಹರೆಯವದಲ್ಲಿಯೂ ಸೋಂಕು ಹರಡುತ್ತಿರುವುದು ಆತಂಕಕಾರಿಯಾಗಿದೆ ಎಂದು ವರದಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮಕ್ಕಳಿಗಾಗಿಯೇ ವಿಶೇಷ ಆಸ್ಪತ್ರೆ, ಕೋವಿಡ್ ವಾರ್ಡ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಮಕ್ಕಳಿಗೆ ಯಾವುದೇ ಆಸ್ಪತ್ರೆಯಲ್ಲಿದ್ದಂತೆ ಭಾಸವಾಗದೇ ನರ್ಸರಿ, ಶಾಲೆಗಳಲ್ಲಿಯೇ ತಾವು ಇದ್ದೇವೆ ಎಂಬ ಭಾವನೆ ಬರುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಅಧಿಕಾರಿ ಅಭಿಜಿತ್ ಭೋಸ್ಲೆ ತಿಳಿಸಿದ್ದಾರೆ.
ರಮೇಶ ಜಾರಕಿಹೊಳಿ ಸಿಡಿ ಪ್ರಕರಣ; ಇಂದು ಮಹತ್ವದ ವಿಚಾರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ