ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ್ದು, ಅವರ ನಿವಾಸದ ಮೆಲೆ ದಾಳಿ ನಡೆಸಿದೆ.
ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಹಾಗೂ ನಾಗ್ಪುರದಲ್ಲಿನ ಅನಿಲ್ ದೇಶ್ ಮುಖ್ ನಿವಾಸ ಸೇರಿದಂತೆ 4 ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಮುಂಬೈನ ಬಾರ್ ಹಾಗೂ ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಹಣ ವಸೂಲಿ ಮಾಡುವಂತೆ ಪೊಲೀಸ್ ಅಧಿಕಾರಿಯಾಗಿದ್ದ ಸಚಿನ್ ವಾಜೆ ಗೆ ಸೂಚಿಸಿದ್ದಾಗಿ ಮಾಜಿ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್, ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಆರೋಪಿಸಿದ್ದರು. ಈ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಇದರ ಬೆನ್ನಲ್ಲೇ ಅನಿಲ್ ದೇಶ್ ಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ಬಿಗ್ ಶಾಕ್…
ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ