
55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಮಾದಕ ವಸ್ತು, ಡ್ರಗ್ಸ್ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಹಾರಾಷ್ಟ್ರದ ANTF ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಮೂರು ಡ್ರಗ್ಸ್ ಫ್ಯಾಕ್ಟರಿಗಳನ್ನು ಸೀಜ್ ಮಾಡಿರುವ ಘಟನೆ ನಡೆದಿದೆ.
ಆರ್ ಜೆ ಇವೆಂಟ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿಗಳನ್ನು ನಡೆಸುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಕಿಂಗ್ ಪಿನ್ ಗಳನ್ನು ಅರೆಸ್ಟ್ ಮಾಡಲಾಗಿದೆ.
ಕೆಲ ದಿನಗಳ ಹಿಂದೆ ಮುಂಬೈನಲ್ಲಿ 1.5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಗಿತ್ತು. ಈ ವೇಳೆ ಬಂಧಿತ ಅಬ್ದುಲ್ಲಾ ಖಾದರ್ ಶೇಖ್ ವಿಚಾರಣೆ ವೇಳೆ ಬಾಯ್ಬಿಟ್ಟ ಮಾಹಿತಿ ಮೇರೆಗೆ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಸಲಾಗಿತ್ತು. ಪ್ರಶಾಂತ್ ನೀಡಿದ ಮಾಹಿತಿ ಮೇರೆಗೆ ಈಗ ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.
ಹೊರಮಾವು, ಯರಪ್ಪನಹಳ್ಳಿ ಹಾಗೂ ಕಣ್ಣೂರು ಬಳಿ ಮೂರು ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆಯಾಗಿದ್ದು, ದಾಳಿ ವೇಳೆ 41 ಕೆಜಿ ಘನ ಎಂಡಿಎಂ ಎ ಹಾಗೂ 17 ಕೆಜಿ ದ್ರವ ಎಂಡಿಎಂ ಎ ಸೇರಿ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ.
ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ.




