*ಸರ್ಕಾರಿ ಹಾಸ್ಟೆಲ್ ನಲ್ಲಿ ಹಾವು ಕಡಿತ: ಮೂವರು ವಿದ್ಯಾರ್ಥಿನಿಯರು ಸಾವು; ಮೂವರು ಬಾಲಕಿಯರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಆಶ್ರಮ ಶಾಲೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭಿರವಾಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಬುಡಕಟ್ಟು ಸಮುದಾಯದ ಜನರು ಹೆಚ್ಚಾಗಿ ವಾಸವಾಗಿರುವ ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನಲ್ಲಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಆಶ್ರಮ ಶಾಲೆಯ 6 ಬಾಲಕಿಯರು ಹಾವು ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದು, ಇತರ ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.Home … Continue reading *ಸರ್ಕಾರಿ ಹಾಸ್ಟೆಲ್ ನಲ್ಲಿ ಹಾವು ಕಡಿತ: ಮೂವರು ವಿದ್ಯಾರ್ಥಿನಿಯರು ಸಾವು; ಮೂವರು ಬಾಲಕಿಯರ ಸ್ಥಿತಿ ಗಂಭೀರ*