ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ವಿವಾದ ಬೆನ್ನಲ್ಲೇ ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಬಸ್ ಗಳನ್ನು ಮಹಾರಾಷ್ಟ್ರ ಸಾರಿಗೆ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್ ಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಕರ್ನಾಟಕ ಬಸ್ ಗಳಿಗೆ ಮಹಾರಾಷ್ಟ್ರದ ಔರಂಗಾಬಾದ್ ನ ದೌಂಡ್ ಗ್ರಾಮದಲ್ಲಿ ಕಪ್ಪು ಮಸಿ ಬಳಿದು ಮರಾಠಿ ಸಂಘಟನೆ ಉದ್ಧಟತನ ಮೆರೆದ ಬೆನ್ನಲ್ಲೇ ಮಹಾರಾಷ್ಟ್ರದ ಸಾರಿಗೆ ಬಸ್ ಗಳಿಗೂ ಕರ್ನಾಟಕದಲ್ಲಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತವಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಮಹಾರಾಷ್ಟ್ರ ಸಾರಿಗೆ ಇಲಾಖೆ ಮುಂಜಾಗೃತಾ ಕ್ರಮವಾಗಿ ಬಸ್ ಸೇವೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ.
ಏಕಾಏಕಿ 300ಕ್ಕೂ ಹೆಚ್ಚು ಮಹಾರಾಷ್ಟ್ರ ಬಸ್ ಗಳ ಸಂಚಾರ ಸ್ಥಗಿತಗೊಡಿಂದೆ. ಬೆಳಗಾವಿ, ಬೀದರ್ ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ಆಗಮಿಸುತ್ತಿದ್ದ MSRTC ಬಸ್ ಗಳು ಬಂದ್ ಆಗಿವೆ ಎಂದು ತಿಳಿದುಬಂದಿದೆ. ಏಕಾಏಕಿ ಬಸ್ ಸಂಚಾರ ಸ್ಥಗಿತವಾಗಿರುವುದರಿಂದ ಮಾಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುತ್ತಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
ಕರ್ನಾಟಕ ಬಸ್ ಅಡ್ಡಗಟ್ಟಿ ಪುಂಡಾಟ ಮೆರೆದ ಮರಾಠಿ ಕಾರ್ಯಕರ್ತರು
https://pragati.taskdun.com/karnataka-maharashtra-border-issuekarnataka-busblack-inkmarati-sangha/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ