Latest

ಮಹಾ ಮಳೆಗೆ ಕುಸಿದ ಕಟ್ಟಡ; 6 ಜನ ಸಾವು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಲ್ಲಿ ಒಂದೆಡೆ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಇನ್ನೊಂದೆಡೆ ಭಾರೀ ಮಳೆಯಿಂದಾಗಿ ಕಟ್ಟಡಗಳು ಕುಸಿಯುತ್ತಿವೆ. ನಿರಂತರವಾಗಿ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಭಾರೀ ಮಳೆಗೆ ಎರಡು ಕಡೆಗಳಲ್ಲಿ ಕಟ್ಟಡ ಕುಸಿದಿದ್ದು, 4 ಜನರು ಮೃತಪಟ್ಟಿದ್ದಾರೆ. 17 ಜನರು ಗಾಯಗೊಂಡಿದ್ದಾರೆ.

ಮಲ್ವಾನಿ ಭಾಗದಲ್ಲಿ ಮನೆಯ ಒಂದು ಭಾಗ ಕುಸಿದಿತ್ತು. ಈ ವೇಳೆ ಈ ಕಟ್ಟಡದ ಅವಶೇಷದ ಅಡಿಯಲ್ಲಿ ಸುಮಾರು 17 ಜನ ಸಿಲುಕಿದ್ದರು. ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಳಿದವರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಈ ಪೈಕಿ ನಾಲ್ಕು ಜನರಿಗೆ ಗಾಯಗಳಾಗಿವೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮುಂಬೈನ ಫೋರ್ಟ್​ ಭಾಗದಲ್ಲಿ ಮತ್ತೊಂದು ಕಟ್ಟಡ ಕುಸಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 14 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಇದೇ ರೀತಿಯ ಮಳೆ ಮುಂದುವರಿಯಲಿದೆ ಎನ್ನಲಾಗಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button