
ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.




