VTU Add
Beereshwara 36
LaxmiTai 5

ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಬಸ್; 25 ಪ್ರಯಾಣಿಕರು ಸಜೀವದಹನ

Anvekar 3

ಪ್ರಗತಿವಾಹಿನಿ ಸುದ್ದಿ; ಬುಲ್ದಾನ್: ಭೀಕರ ಅಪಘಾತದಲ್ಲಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿಕೊಂಡ ಬೆಂಕಿಯಲ್ಲಿ 25 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ್ ನಲ್ಲಿ ನಡೆದಿದೆ.

ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ ಬುಲ್ಧಾನ ಜಿಲ್ಲೆಯ ಸಿಂಧಖೇಡ್ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿ, ಏಕಾಏಕಿ ಬೆಂಕಿ ಹೊತಿಕೊಂಡಿದೆ. ಕ್ಷಣಾರ್ಧದಲ್ಲಿ ಬಸ್ ಸುತ್ಟು ಕರಕಲಾಗಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 25 ಜನ ಸಜೀವದಹನವಾಗಿದ್ದಾರೆ.

Emergency Service

ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ನಿನ್ನೆ ತಡರಾತ್ರಿ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Cancer Hospital 2


Bottom Add3
Bottom Ad 2