*ಕಂದಕಕ್ಕೆ ಉರುಳಿ ಬಿದ್ದ ಕಾರು: 8 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗರ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ಮಹಾರಾಷ್ಟ್ರದ ರಾಯಗಢದ ಮಹಾಬಲೇಶ್ವರ-ಪೋಲಾದ್ಪುರ ರಸ್ತೆಯಲ್ಲಿ ತಡರಾತ್ರಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ 8 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಆಳವಾದ ಕಂದಕಕ್ಕೆ ಉರುಳಿದೆ.ಅಂಬೆನಾಲಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಈ ಕಂದಕವು ಸುಮಾರು 1,000 ಅಡಿ ಆಳದಲ್ಲಿದೆ ಎಂದು ಅಂದಾಜಿಸಿದ್ದಾರೆ. ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ.Home … Continue reading *ಕಂದಕಕ್ಕೆ ಉರುಳಿ ಬಿದ್ದ ಕಾರು: 8 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed