ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಸ್ಫೋಟಗೊಂಡಿದ್ದು, 10 ಸಚಿವರು, 20 ಶಾಸಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೇರೀತಿ ಮುಂದುವರೆದರೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವುದು ಅನಿವಾರ್ಯವಾಗಲಿದೆ. 10 ಸಚಿವರು, 20 ಶಾಸಕರಿಗೆ ಕೊರೊನಾ ಸೋಂಕು ತಗುಲಿದ್ದು, ಎಲ್ಲರೂ ಕ್ವಾರಂಟೈನ್ ಆಗಿದ್ದಾರೆ. ಕಳೆದ 12 ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಮುಂಬೈನಲ್ಲಿ ಜನವರಿ 7ರವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಯಾವುದೇ ರಾಜಕೀಯ ಸಭೆ ಸಮಾರಂಭ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಗೈಡ್ ಲೈನ್ ಕೂಡ ಪ್ರಕಟವಾಗಿದೆ.
ಮಹಾರಾಷ್ಟ್ರದಲ್ಲಿ 8067 ಜನರಲ್ಲಿ ಕೊರೊನಾ ಸೋಂಕು ದೃಧಪಟ್ಟಿದ್ದರೆ, 454 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಅದರಲ್ಲಿ ಮುಂಬೈನಲ್ಲಿಯೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಅಂದರೆ 5428ಜನರಲ್ಲಿ ವೈರಸ್ ಪತ್ತೆಯಾಗಿದೆ.
9 ತಿಂಗಳ ಬಳಿಕ ಮತ್ತೆ ದಿಢೀರ್ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ವ್ಯಾಪಕವಾಗಿ ಹರಡುತ್ತಿದೆ ರೂಪಾಂತರಿ ವೈರಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ